ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-11-15 17:27 GMT

ಮಲ್ಪೆ, ನ.15: ವಿಪರೀತ ಕುಡಿತದ ಚಟದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಮಲ್ಪೆ ಜ್ಞಾನಜ್ಯೋತಿ ಭಜನಾ ಮಂದಿರ ಬಳಿಯ ನಿವಾಸಿ  ಗೋವರ್ಧನ(39) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ನ.15ರಂದು ಬೆಳಗ್ಗೆ ರೂಮ್ನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಮಲ್ಪೆಪೊಲಿೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಕುಂದಾಪುರ ಪಡುಕೇರಿಯ ಶಂಕರ ಶೇರಿಗಾರ್(69) ಎಂಬವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ನ.14ರಂದು ರಾತ್ರಿ ಮನೆಯ ಬಾವಿಗೆ ಅಳವಡಿಸಿದ ಹಗ್ಗದಿಂದ ಕುತ್ತಿಗೆಗೆ ಬಿಗಿದು ಬಾವಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News