ಬೆಂಗಳೂರು: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಬಲಿ

Update: 2019-11-15 17:27 GMT

ಬೆಂಗಳೂರು, ನ.15: ವೇಗವಾಗಿ ಬಂದ ಕ್ಯಾಂಟರ್ ಢಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ವ್ಯಕ್ತಿ ಮೃತಪಟ್ಟಿರುವ ಘಟನೆ ಚಿಕ್ಕಜಾಲದ ಕೆಐಎಡಿಬಿ ರಸ್ತೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಬಂಡಿ ಕೊಡುಗೇಹಳ್ಳಿಯ ಮಂಜುನಾಥ್(38) ಮೃತಪಟ್ಟವರು ಎಂದು ತಿಳಿದುಬಂದಿದೆ.

ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್, ಗುರುವಾರ ಬೆಳಗ್ಗೆ ಕೆಐಎಡಿಬಿ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಕ್ಯಾಂಟರ್ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಘಟನೆ ಬಳಿಕ ಚಾಲಕ ಪರಾರಿಯಾಗಿದ್ದು, ಈ ಸಂಬಂಧ ಚಿಕ್ಕಜಾಲ ಸಂಚಾರ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News