ಬೆಂಗಳೂರು: ನ.16ರಂದು ರಾಷ್ಟ್ರೀಯ ಪತ್ರಿಕಾ ದಿನಾಚರಣೆ

Update: 2019-11-15 17:44 GMT

ಬೆಂಗಳೂರು, ನ.15: ಕರ್ನಾಟಕ ಮಾಧ್ಯಮ ಅಕಾಡೆಮಿಯು ನ.16 ರಂದು ಶನಿವಾರ ಬೆಳಗ್ಗೆ 10.30ಕ್ಕೆ ನಗರದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ಪ್ರೊ.ಕೆ.ವೆಂಕಟಗಿರಿಗೌಡ ಸಭಾಂಗಣದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ ಕೆ.ಆರ್.ವೇಣುಗೋಪಾಲ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಪಿ.ಮಣಿವಣ್ಣನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ, ಮುಖ್ಯಮಂತ್ರಿಯವರ ಮಾಧ್ಯಮ ಕಾರ್ಯದರ್ಶಿ ಎನ್.ಭೃಂಗೀಶ್ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಬಿ.ಕೆ.ರವಿ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.

ಈ ವೇಳೆ ಹಿರಿಯ ಪತ್ರಕರ್ತೆ ಸಿ.ಜಿ.ಮಂಜುಳಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕನ್ನಡಪ್ರಭ ಪತ್ರಿಕೆಯ ಸಂಪಾದಕ ರವಿ ಹೆಗಡೆ ‘ವರದಿಗಾರಿಕೆ: ಮಾಧ್ಯಮಗಳ ಜಗತ್ತಿನೊಳಗೊಂದು ಪಯಣ’ ಕುರಿತಂತೆ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಸಿ. ರೂಪಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News