ನ.19ರಂದು 66ನೇ ಅಖಿಲ ಭಾರತ ಸಹಕಾರಿ ಸಪ್ತಾಹ

Update: 2019-11-16 15:34 GMT

ಮಂಗಳೂರು, ನ.16: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಜಿಲ್ಲಾ ಸಹಕಾರಿ ಯೂನಿಯನ್‌ಗಳ ಸಂಯುಕ್ತಾಶ್ರಯದಲ್ಲಿ 66ನೇ ಅಖಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಸಹಕಾರ ಸಂಸ್ಥೆಗಳ ಮೂಲಕ ಆರ್ಥಿಕ ಸೇರ್ಪಡೆ ತಂತ್ರಜ್ಞಾನ ಅಳವಡಿಕೆ ಮತ್ತು ಗಣಕೀಕರಣ ದಿನಾಚರಣೆಯನ್ನು ನ.19ರಂದು ಬೆಳಗ್ಗೆ 10:45ಕ್ಕೆ ಕುಲಶೇಖರದ ಕೋರ್ಡೆಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಡೆ ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ‘ನಂದಿನಿ ಕೋಲ್ಡ್ ಕಾಫಿ’ ಬಿಡುಗಡೆ ಮಾಡಲಿದ್ದಾರೆ. ಲೋಕಸಭಾ ಸದಸ್ಯ ನಳಿನ್‌ಕುಮಾರ್ ಕಟೀಲ್ ‘ನನ್ನಾಸೆಯ ನಂದಿನಿ’ ಸಾಕ್ಷಚಿತ್ರ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News