ಉರ್ವ ಮಾರಿಯಮ್ಮ ದೇವಸ್ಥಾನದ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ

Update: 2019-11-17 14:37 GMT

ಮಂಗಳೂರು, ನ.17: ನಗರದ ಅತ್ಯಂತ ಪುರಾತನ ದೇವಸ್ಥಾನವಾದ ಉರ್ವ ಮಾರಿಯಮ್ಮ ಕ್ಷೇತ್ರಕ್ಕೆ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 50 ಲಕ್ಷ ರೂ. ಮಂಜೂರಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

2019-20ನೇ ಸಾಲಿನ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರವಾಸಿ ಸ್ಥಳಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಉರ್ವ ಮಾರಿಯಮ್ಮ ಕ್ಷೇತ್ರಕ್ಕೆ 50 ಲಕ್ಷ ರೂ. ಮಂಜೂರಾಗಿದ್ದು ಅದರಲ್ಲಿ ಪ್ರಸ್ತುತ ಸಾಲಿನಲ್ಲಿ 25 ಲಕ್ಷ ರೂ. ಮೊದಲ ಹಂತದಲ್ಲಿ ಶೀಘ್ರವೇ ಬಿಡುಗಡೆಯಾಗಲಿದೆ ಎಂದು ಹೇಳಿದರು.

ಕ್ಷೇತ್ರದ ವ್ಯಾಪ್ತಿಯ 6 ಕುದ್ರುಗಳು, ಸುಲ್ತಾನ್ ಬತ್ತೇರಿ, ಬೆಂಗರೆ ಪ್ರದೇಶಗಳ ಅಭಿವೃದ್ಧಿಯ ಕುರಿತು ಚಿಂತನೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಪ್ರವಾಸಿ ತಾಣಗಳು ಹಾಗೂ ದೇವಾಲಯಗಳು ಸಾಕಷ್ಟು ಇದೆ. ಮಾರಿಗುಡಿ ದೇವಸ್ಥಾನದಂತೆ ಅತೀ ಪುರಾತನ ದೇವಾಲಯಗಳೂ ಕೂಡ ಸಾಕಷ್ಟು ಸಂಖ್ಯೆಯಲ್ಲಿದೆ. ಅವೆಲ್ಲವನ್ನೂ ಕೂಡ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವಂತೆ ಅಭಿವೃದ್ಧಿಪಡಿಸಲು ಶ್ರಮಿಸುವುದಾಗಿ ಶಾಸಕ ಕಾಮತ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News