'ವಕ್ಫ್' ಅಧಿಕಾರ ಮೊಟಕುಗೊಳಿಸಲು ಪ್ರಯತ್ನ: ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಡಾ.ಯೂಸುಫ್

Update: 2019-11-17 16:48 GMT

ಬೆಂಗಳೂರು, ನ.17: ರಾಜ್ಯದ ಅಲ್ಪಸಂಖ್ಯಾತ ಇಲಾಖೆಯ ಅಧಿಕಾರಿಗಳು ವಕ್ಫ್ ಬೋರ್ಡ್‌ನ ಅಧಿಕಾರವನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿದ್ದಾರೆಂದು ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಡಾ.ಮುಹಮ್ಮದ್ ಯೂಸುಫ್ ಆರೋಪಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಸಂಸ್ಥೆಗಳು ವಕ್ಫ್ ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಆದರೆ, ಈಗ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಿರುವುದು ಸರಿಯಲ್ಲ ಎಂದರು.

ಸ್ವಾಯತ್ತ ಸಂಸ್ಥೆಯಾಗಿರುವ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳ ಬೇಕಾದರೆ ಪೂರ್ಣ ಪ್ರಮಾಣದ ಬೋರ್ಡ್ ಸದಸ್ಯರ ಒಪ್ಪಿಗೆ ಪಡೆಯಬೇಕು. ಆದರೆ, ಅಧಿಕಾರಿಗಳು ಇದಕ್ಕೆ ಮನ್ನಣೆ ನೀಡುತ್ತಿಲ್ಲ ಎಂದು ಅವರು ದೂರಿದರು.

ವಕ್ಫ್ ಬೋರ್ಡ್‌ಗೆ ಕಳೆದ ಮಾರ್ಚ್ ತಿಂಗಳಲ್ಲಿ ಚುನಾವಣೆ ನಡೆದಿದೆ. ಈಗ ನಾವು ನವೆಂಬರ್ ಮಧ್ಯ ಭಾಗದಲ್ಲಿದ್ದೇವೆ. ಹೈಕೋರ್ಟ್ ನಿರ್ದೇಶನ ನೀಡಿದ್ದರೂ ಈವರೆಗೆ ವಕ್ಫ್ ಬೋರ್ಡ್ ರಚನೆ ಮಾಡಿಲ್ಲ ಎಂದು ಮುಹಮ್ಮದ್ ಯೂಸುಫ್ ಬೇಸರ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News