ಶಿಕ್ಷಣದಿಂದ ಸುಶಿಕ್ಷಿತ ಸಮಾಜ ನಿರ್ಮಾಣ ಸಾಧ್ಯ: ವಿಧಾನಸಭೆ ಸ್ಪೀಕರ್ ಕಾಗೇರಿ

Update: 2019-11-17 17:17 GMT

ಬೆಂಗಳೂರು, ನ.17: ಶೈಕ್ಷಣಿಕ ಪ್ರಗತಿಯಿಂದ ಮಾತ್ರ ಸುಶಿಕ್ಷಿತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಹೇಳಿದ್ದಾರೆ.

ರವಿವಾರ ನಗರದ ಎನ್.ಆರ್.ಕಾಲೋನಿಯ ಶ್ರೀರಾಮಮಂದಿರದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಸಪ್ತಋಷಿ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಅವರು ಮಾತನಾಡಿದರು.

ಎಲ್ಲ ಸಮುದಾಯಗಳು ಶೈಕ್ಷಣಿಕವಾಗಿ ಪ್ರಗತಿ ಹೊಂದಿದಾಗ ದೇಶದ ಪ್ರಗತಿ ಸಾಧ್ಯ. ಶಿಕ್ಷಣ ನೀಡುವ ಜೊತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಬೇಕು. ಅಲ್ಲದೆ, ವ್ಯಕ್ತಿ ನಿರ್ಮಾಣ್ಕಕೆ ಆದ್ಯತೆ ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಏಕಾಗ್ರತೆ ಮತ್ತು ಛಲವನ್ನು ರೂಢಿಸಿಕೊಂಡಿದ್ದರಿಂದ ಸಾಧನೆ ಮಾಡಲು ಸಾಧ್ಯ. ಇಂದಿನ ದಿನಗಳಲ್ಲಿ ಮೊಬೈಲ್ ಬಿಟ್ಟಿರಲು ಸಾಧ್ಯವೇ ಇಲ್ಲ ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಆ ಮೊಬೈಲ್, ಟಿವಿಗಳನ್ನು ಬಿಟ್ಟು ಛಲದಿಂದ ಈ ಸಾಧನೆ ಮಾಡಿರುವುದು ಪ್ರಶಂಸನಾರ್ಹ ಎಂದು ಕಾಗೇರಿ ನುಡಿದರು.

ಸಮಾರಂಭದಲ್ಲಿ ಶಾಸಕ ರವಿಸುಬ್ರಹ್ಮಣ್ಯ, ಶಿಕ್ಷಣ ತಜ್ಞ ಡಾ.ಎಚ್.ಎಸ್. ನಾಗರಾಜ್, ಎಕೆಬಿಎಂಎಸ್ ಅಧ್ಯಕ್ಷ ಕೆ.ಎನ್.ವೆಂಕಟನಾರಾಯಣ್ ಸೇರಿದಂತೆ ಹಲವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News