ಪಾಂಡವಪುರ: ಡೆಂಗ್‍ ಗೆ ರೈತ ಬಲಿ

Update: 2019-11-17 18:04 GMT

ಪಾಂಡವಪುರ, ನ.17: ರೈತರೋರ್ವರು ಮಾರಕ ಡೆಂಗ್ ಜ್ವರಕ್ಕೆ ತುತ್ತಾಗಿ ಮೃತಪಟ್ಟಿಗಿರುವ ಘಟನೆ ತಾಲೂಕಿನ ಚಾಗಶೆಟ್ಟಹಳ್ಳಿ ಗ್ರಾಮದಲ್ಲಿ ರವಿವಾರ ಬೆಳಗ್ಗೆ ನಡೆದಿದೆ.

ಗ್ರಾಮದ ನಿವಾಸಿ ಕುಮಾರ್ (45) ಎಂಬವರು ಡೆಂಗ್ ಜ್ವರಕ್ಕೆ ಬಲಿಯಾದ ರೈತ. ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳತ್ತಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ.

ಮೃತರಿಗೆ ಪತ್ನಿ ಕುಮಾರಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ. ಇತ್ತಿಚೆಗೆ ತಾಲೂಕಿನಲ್ಲಿ ಡೆಂಗ್ ಜ್ವರದ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ತಾಲೂಕು ಆರೊಗ್ಯಾಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಚಾಗಶೆಟ್ಟಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News