ಚಂದ್ರಶೇಖರ ಸ್ವಾಮೀಜಿಯನ್ನು ಭೇಟಿಯಾದ ಸಿಎಂ ಕಾರ್ಯದರ್ಶಿ ವಿಶ್ವನಾಥ್

Update: 2019-11-18 10:36 GMT

ಬೆಂಗಳೂರು : ರಾಜ್ಯದಲ್ಲಿ ನಡೆಯುವ ವಿಧಾನಸಭಾ ಉಪಚುನಾವಣೆಯ ಪೂರ್ವ ಭಾವಿಯಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ, ಶಾಸಕ ಎಸ್.ಆರ್. ವಿಶ್ವನಾಥ್ ಅವರು ಬೆಂಗಳೂರಿನಲ್ಲಿರುವ ಅಂತಾರಾಷ್ಟ್ರೀಯ ವಾಸ್ತು ತಜ್ಞ, ಧಾರ್ಮಿಕ ಗುರು, ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಅವರ ಆಶ್ರಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಕುರಿತು ಸ್ವಾಮೀಜಿ ಅವರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭ ಎಸ್.ಆರ್.ವಿಶ್ವನಾಥ್ ಅವರನ್ನು ಸನ್ಮಾನಿಸಲಾಯಿತು.

ರಾಜ್ಯದಲ್ಲಿ ತೀವ್ರ ಮಳೆಯ ಹಿನ್ನೆಲೆಯಲ್ಲಿ ಹಾನಿಗೊಳಗಾದ ಪ್ರದೇಶದ ಪುನಶ್ಚೇತನಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಕೋಟಿ ರೂ. ಸಹಾಯಧನ  ನೀಡಿರುವ ಚಂದ್ರಶೇಖರ ಸ್ವಾಮೀಜಿ ಅವರನ್ನು ವಿಶ್ವನಾಥ್ ಅವರು ಸರಕಾರದ ಪರವಾಗಿ ಅಭಿನಂದಿಸಿದರು. ಸ್ವಾಮೀಜಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಿರುವುದು ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳಿಗೆ ಪ್ರೇರೇಪಣೆ ನೀಡಿದೆ. ಪ್ರೇರೇಪಣೆ ಪಡೆದ ಸಂಸ್ಥೆಗಳು ಪರಿಹಾರ ನಿಧಿಗೆ ಹಣವನ್ನು ನೀಡಲು ಮುಂದೆ ಬಂದಿವೆ. ಇದು ನಿಜಕ್ಕೂ ಶ್ಲಾಘನೀಯ ಎಂದು ವಿಶ್ವನಾಥ್ ಹೇಳಿದರು.

ಧಾರ್ಮಿಕ ಗುರುಗಳಿಂದ ಸಲಹೆ, ಸೂಚನೆ, ಮಾರ್ಗದರ್ಶನ ಪಡೆಯುವ ಸಂಪ್ರದಾಯ ಭಾರತೀಯ ರಾಜಕೀಯದಲ್ಲಿ ಪುರಾತನ ಕಾಲದಿಂದಲೂ ಬಂದಿದೆ. ಅದೇ ಮಾದರಿಯಲ್ಲಿ ಚುನಾವಣೆ ಪೂರ್ವದಲ್ಲಿ ಎಸ್.ಆರ್. ವಿಶ್ವನಾಥ್ ಅವರು ಆಶ್ರಮಕ್ಕೆ ಭೇಟಿ ನೀಡಿ ರಾಜಕೀಯ ಸಮಾಲೋಚನೆ ನಡೆಸಿದ್ದಾರೆ. ಧಾರ್ಮಿಕ ಮುಖಂಡರ ಸಲಹೆ, ಸೂಚನೆ, ಅಭಿಪ್ರಾಯ ಪಡೆದು ಆಡಳಿತ ನಡೆಸುವುದರಿಂದ ಜನತೆಗೆ ಉತ್ತಮ ಆಡಳಿತ ಸಿಗಲಿದೆ ಎಂದು ಚಂದ್ರಶೇಖರ ಸ್ವಾಮೀಜಿ ಹೇಳಿದರು.

ಆಶ್ರಮದ ವ್ಯವಸ್ಥಾಪಕಿ ರಜನಿ ಸಿ. ಭಟ್, ಸಂಚಾಲಕ ಪುನೀತ್ ಕೃಷ್ಣ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News