ಸಜೀಪಮೂಡ ಗ್ರಾಪಂನ ನೂತನ ಕಟ್ಟಡ ಉದ್ಘಾಟನೆ

Update: 2019-11-18 16:51 GMT

ಬಂಟ್ವಾಳ, ನ. 18: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತಿರಾಜ್ ಇಲಾಖೆ ಇದರ ವತಿಯಿಂದ ನಿರ್ಮಾಣಗೊಂಡ ಸಜೀಪ ಮೂಡ ಗ್ರಾಪಂನ ನೂತನ ಕಟ್ಟಡವನ್ನು ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಡೆಯಿತು.

ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪಂಚಾಯತ್‍ಗಳು ಅಭಿವೃದ್ದಿಯಾದರೆ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯವಿದೆ. 14ನೇ ಹಣಕಾಸು ಆಯೋಗದ ಮೂಲಕ ಪಂಚಾಯತ್‍ಗೆ ನೇರ ಅನುದಾನ ಬಿಡುಗಡೆ ಮಾಡುವ ಮೂಲಕ ಪಂಚಾಯತ್‍ಗಳನ್ನು ಅಭಿವೃದ್ಧಿ ಪಡಿಸಿ ಸಶಕ್ತಗೊಳಿಸುವ ಕಾರ್ಯ ನಡೆಯುತ್ತಿದೆ ಎಂದರು. 

ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹಾಗೂ ವಿಶೇಷ ಆಹ್ವಾನಿತರಾಗಿದ್ದಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿದರು. 
ಕಾರ್ಯಕ್ರಮದಲ್ಲಿ ಮಡಿವಾಳ ಸಮಾಜ ಸೇವಾ ಸಂಘದ ಅಧ್ಯಕ್ಷ ಎನ್.ಕೆ.ಶಿವ, ಗುತ್ತಿಗೆದಾರ ಪಿ.ಎಸ್.ಇಕ್ಬಾಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಮಲ ಅವರನ್ನು ಸನ್ಮಾನಿಸಲಾಯಿತು. ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು. 

ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೆರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯ ಸಂಜೀವ ಪೂಜಾರಿ, ಜಿಪಂ ಮಾಜಿ ಅಧ್ಯಕ್ಷ ಸದಾನಂದ ಪೂಂಜಾ, ಇಓ ರಾಜಣ್ಣ, ಇರಾ ಗ್ರಾಪಂ ಅಧ್ಯಕ್ಷ ಅಬ್ದುಲ್ ರಝಾಕ್, ತಾಂತ್ರಿಕ ತಜ್ಞ ಕುಶಾಲ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. 

ಪಂಚಾಯಿತಿ ಅಧ್ಯಕ್ಷ ವಿಶ್ವನಾಥ ಬೆಳ್ಚಾಡ, ಉಪಾಧ್ಯಕ್ಷೆ ಲೀನಾ ಮಿರಾಂಡ ವೇದಿಕೆಯ್ಲಲಿದ್ದರು. ಗಿರೀಶ್ ಕುಮಾರ್ ಪೆರ್ವ ಸ್ವಾಗತಿಸಿದರು. ಪಿಡಿಒ ನಿರ್ಮಲ ವಂದಿಸಿದರು. ಬಿ.ರಾಮಚಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News