ಉಪಚುನಾವಣೆಗೆ ಆಡಳಿತ ಪಕ್ಷದಿಂದ ಜನರ ತೆರಿಗೆ ಹಣ ವೆಚ್ಚ: ಕುಮಾರಸ್ವಾಮಿ ಆರೋಪ

Update: 2019-11-18 17:16 GMT

ಬೆಂಗಳೂರು, ನ. 18: ಉಪಚುನಾವಣೆ ನಡೆಸಲು ಆಡಳಿತಾರೂಢ ಬಿಜೆಪಿಯಿಂದ ಜನತೆ ತೆರಿಗೆ ಹಣವನ್ನು ವೆಚ್ಚ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ಯಶವಂತಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ನಾಮಪತ್ರ ಸಲ್ಲಿಸುವ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಶವಂತಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜನರ ಹಣವನ್ನೇ ಚುನಾವಣೆಯಲ್ಲಿ ಖರ್ಚು ಮಾಡಲು ಹೊರಟಿದ್ದಾರೆ. ಇಂತಹವರಿಂದ ಜನರಿಗೆ ಲಾಭವಿಲ್ಲ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ 1 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡಲಾಗಿದೆ. ರೈತರ ಕಬ್ಬಿನ ಹಣವನ್ನು ಬಾಕಿ ಉಳಿಸಿಕೊಂಡು ‘ಸಾಹುಕಾರ್’ ಆದವರು ಇದ್ದಾರೆ ಎಂದು ಪರೋಕ್ಷವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೆಸರು ಉಲ್ಲೇಖಿಸದೆ ಟೀಕಿಸಿದರು.

ಬೆಳಗಾವಿ ಜಿಲ್ಲೆಯ 3 ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದು, ಆ ಜಿಲ್ಲೆ ಅಭಿವೃದ್ಧಿಗೆ ನಾನು ನೀಡಿದಷ್ಟು ಕೊಡುಗೆ ಯಾರೂ ನೀಡಿಲ್ಲ ಎಂದ ಅವರು, ಆಪರೇಷನ್ ಕಮಲ ಆರಂಭವಾಗಿದ್ದೇ ಬೆಳಗಾವಿಯಿಂದ. ಹೀಗಾಗಿ ಅವರಿಗೆ ಮತದಾರರು ಪಾಠ ಕಲಿಸಬೇಕು ಎಂದು ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News