ಅಕ್ರಮ ಮರಳು ಸಾಗಾಟ: ಟಿಪ್ಪರ್ ವಶ

Update: 2019-11-19 16:22 GMT

ಬೈಂದೂರು, ನ.19: ಹೊರ ಜಿಲ್ಲೆಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರನ್ನು ಬೈಂದೂರು ಪೊಲೀ ಸರು ನ.18ರಂದು ರಾತ್ರಿ 10ಗಂಟೆ ಸುಮಾರಿಗೆ ಶಿರೂರು ಗ್ರಾಮದ ಬಪ್ಪನಬೈಲು ರೈಲ್ವೆ ನಿಲ್ದಾಣದ ಸಮೀಪ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿಯಂತೆ ಕಳವು ಮಾಡಿದ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 5ಲಕ್ಷ ರೂ. ಮೌಲ್ಯದ ಟಿಪ್ಪರ್ ಹಾಗೂ 12 ಸಾವಿರ ರೂ. ವೌಲ್ಯದ ಸುಮಾರು 3 ಯುನಿಟ್ ಮರಳನ್ನು ಪೊಲೀಸರು ವಶಪಡಿಸಿಕೊಂಡಿ ದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News