ಶಿಕ್ಷಕರ ನೇಮಕಾತಿ; ದಾಖಲೆಗಳ ಪರಿಶೀಲನೆ

Update: 2019-11-19 16:25 GMT

ಉಡುಪಿ, ನ.19: 2019-20 ನೇ ಸಾಲಿನ ಸರಕಾರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ, ಸ್ಪರ್ಧಾತ್ಮಕ ಪರೀಕ್ಷೆ ಬರೆದು ಅರ್ಹರಾದ ಅಭ್ಯರ್ಥಿಗಳ 1:2ಅನುಪಾತದ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಬೆಂಗಳೂರು ಕೇಂದ್ರೀಕೃತ ದಾಖಾತಿ ಘಟಕದ ವಿಶೇಷಾಧಿಕಾರಿ ಪ್ರಕಟಿಸಿದೆ.

ಅರ್ಹತಾ ಪಟ್ಟಿಯಲ್ಲಿರುವಂತೆ ಜಿಲ್ಲೆಯಲ್ಲಿ ಆಯ್ಕೆಯಾಗಿರುವ ಸಮಾಜ ಪಾಠ, ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಆಯ್ಕೆ ಯಾಗಿರುವ ಅಭ್ಯರ್ಥಿ ಗಳಿಗೆ ನ.25ರಂದು ಮತ್ತು ಆಂಗ್ಲ ವಿಷಯದಲ್ಲಿ ಆಯ್ಕೆಯಾದ ಅ್ಯರ್ಥಿಗಳಿಗೆ ನ.26ರಂದು ಮಣಿಪಾಲದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ 1:2ರ ಪರಿಶೀಲನಾ ಪಟ್ಟಿಯಂತೆ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಸಮರ್ಪಕ ಮೂಲ ದಾಖಲಾತಿಗಳೊಂದಿಗೆ ದ್ವಿಪ್ರತಿ ಯಲ್ಲಿ ಗೆಜೆಟೆಡ್ ಅಧಿಕಾರಿಗಳ ದೃಢೀಕೃತ ಪ್ರತಿ, ತಮ್ಮ ಇತ್ತೀಚಿನ 2 ಭಾವಚಿತ್ರ, ಸ್ವ-ವಿಳಾಸ ಮಾಹಿತಿ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯ ಮಾಹಿತಿ ಹಾಗೂ ಆಧಾರ್‌ಕಾರ್ಡ್ ಪ್ರತಿಯೊಂದಿಗೆ ಲಕೋಟೆಯಲ್ಲಿ ನಿಗದಿ ಪಡಿಸಿದ ದಿನಗಳಂದು ಪರಿಶೀಲನೆಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0820-2574878 ನ್ನು ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News