ಅರಣ್ಯ ಸಂರಕ್ಷಣಾ ಕಾಯ್ದೆ ಕುರಿತು ತರಬೇತಿ ಕಾರ್ಯಕ್ರಮ

Update: 2019-11-19 16:30 GMT

ಉಡುಪಿ, ನ.19: ಕಾರ್ಕಳದ ಕೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಅನುಮತಿ ಸಲುವಾಗಿ ತಂತ್ರಾಂಶದಲ್ಲಿ ಅಳವಡಿಸಬೇಕಾದ ಪ್ರಸ್ಥಾವನೆಗಳ ಬಗ್ಗೆ ಉಪಯೋಗಿ ಸಂಸ್ಥೆಗಳಿಗೆ ತರಬೇತಿ ಕಾರ್ಯ್ರಮವು ಸೋಮವಾರ ನಡೆಯಿತು.

ಪರಿಸರ ಸಚಿವಾಲಯ ಸಹಾಯಕ ಇನ್ಸ್‌ಪೆಕ್ಟರ್ ಜನರಲ್ ಆಫ್ ಪಾರೆಸ್ಟ್ ಪದ್ಮಾವತಿ, ಅರಣ್ಯ ಸಂರಕ್ಷಣಾ ಕಾಯ್ದೆ ಮತ್ತು ವನ್ಯಜೀವಿ ಸಂರಕ್ಷಣಾ ಕಾಯ್ದೆಯಂತೆ ಪ್ರಸ್ತಾವನೆಗಳ ಬಗ್ಗೆ ಪಡೆದುಕೊಳ್ಳಬೇಕಾದ ಅನುಮತಿ ಬಗ್ಗೆ ವಿವರವಾಗಿ ತಿಳಿಸಿದರು.

ಸಹದೇವ ನಾಯಕ್ ಪ್ರಸ್ತಾವನೆಗೆ ಅಗತ್ಯವಿರುವ ವಿವಿಧ ನಕ್ಷೆಗಳನ್ನು ಸಿದ್ದಪಡಿಸುವ ಬಗ್ಗೆ ವಿವರಿಸಿದರು. ಉಪ ವಲಯ ಅರಣ್ಯ ಅಧಿಕಾರಿ ಪೈಜೂರ್ ರೆಹಮಾನ್, ಅನ್‌ಲೈನ್ ಮೂಲಕ ಪ್ರಸ್ತಾವನೆಯನ್ನು ಅಡಕಗೊಳಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

ಮಂಗಳೂರು ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಳನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುಂದಾಪುರ ವಿಬಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಮಲ ಕರಿಕಾಳನ್, ಕುದುರೆಮುಖ ವನ್ಯಜೀವಿ ಕಾರ್ಕಳ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುದ್ರನ್, ಬೈಲೂರು ಸಹದೇವ ನಾಯಕ್, ಕೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಕಾರ್ಕಳ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜ.ಕೆ.ಎನ್, ಶಿಬಿರದ ಉದ್ದೇಶ ತಿಳಿಸಿದರು.ಸಿದ್ದಾಪುರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಗವಾನ್ ದಾಸ್ ಸ್ವಾಗತಿಸಿದರು. ಉಪ ಅರಣ್ಯ ಅಧಿಕಾರಿ ರಾಘವೇಂದ್ರ ವಂದಿಸಿದರು. ಉಪ ವಲಯ ಅರಣ್ಯ ಅಧಿಕಾರಿ ಹರೀಶ್ ನಿರೂಪಿಸಿದರು.

ಕಾರ್ಯಾಗಾರದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಲೋಕೋಪಯೋಗಿ, ಜಿಪಂ ಇಂಜಿನಿಯರಿಂಗ್, ಗ್ರಾಮೀಣ ಕುಡಿಯುವ ನೀರಿನ ಪೂರೈಕೆ, ಸಣ್ಣ ನೀರಾವರಿ, ಮೆಸ್ಕಾಂ, ನಿರ್ಮಿತಿ ಕೇಂದ್ರ ಸೇರಿದಂತೆ ವಿವಿಧ ಇಲಾಖೆಗಳ 37 ಮಂದಿ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News