ಉಡುಪಿ; ನಿವೇಶನ ರಹಿತರ ಅನಿರ್ಧಿಷ್ಟಾವಧಿ ಧರಣಿ ಮೂರನೆ ದಿನಕ್ಕೆ

Update: 2019-11-19 16:33 GMT

ಉಡುಪಿ, ನ.19: ಮನೆ, ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಸರಕಾರಿ/ಖಾಸಗಿ ಜಾಗ ಗುರುತಿಸಿ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಳ್ಳಲಾದ ನಿವೇಶನ ರಹಿತರ ಅನಿರ್ಧಿಷ್ಟಾವಧಿ ಧರಣಿ ಮುಷ್ಕರ ಎರಡನೆ ದಿನವಾದ ಇಂದು ಕೂಡ ಮುಂದುವರೆದಿದೆ.

ಎರಡನೇ ದಿನದ ಹೋರಾಟಕ್ಕೆ ಚಾಲನೆ ನೀಡಿದ ಸಿಐಟಿಯು ಹಿರಿಯ ಮುಖಂಡ ಪಿ.ವಿಶ್ವನಾಥ ರೈ ಮಾತನಾಡಿ, ನಿವೇಶನ ರಹಿತರ ಭೂಮಿ ಹಕ್ಕಿನ ಹೋರಾಟದ ನ್ಯಾಯವಾದ ಬೇಡಿಕೆಯನ್ನು ಈಡೇರಿಸಲು ಜಿಲ್ಲಾಧಿಕಾರಿಗಳು ಮುಂದಾಗಬೇಕು. ಈ ಬೇಡಿಕೆಗೆ ಜಿಲ್ಲಾಡಳಿತ ಸೂಕ್ತವಾಗಿ ಸ್ಪಂದಿಸದಿದ್ದರೆ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಧರಣಿಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ, ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಕವಿರಾಜ್ ಎಸ್., ರಾಜೀವ ಪಡುಕೋಣೆ, ನಾಗರತ್ನ ನಾಡ, ಪದ್ಮಾವತಿ ಶೆಟ್ಟಿ, ಎಚ್.ವಿಠಲ ಪೂಜಾರಿ ಮೊದಲಾದರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News