ತರಬೇತಿಗಾಗಿ ಅರ್ಜಿ ಆಹ್ವಾನ

Update: 2019-11-19 17:29 GMT

ಬೆಂಗಳೂರು, ನ.19: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ವತಿಯಿಂದ ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 180 ದಿನಗಳ ಅವಧಿಯ ಡಿಪ್ಲೋಮಾ ಇನ್ ಕೋ-ಅಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯನ್ನು ಜ.1, 2020ರಿಂದ ಪ್ರಾರಂಭಿಸಲಾಗುತ್ತಿದೆ.

ತರಬೇತಿಯನ್ನು ಪಡೆಯಲಿಚ್ಚಿಸುವ ಅಭ್ಯರ್ಥಿಗಳು ನ.30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ತರಬೇತಿಯನ್ನು ಪಡೆಯುವವರು ಸಹಕಾರ ಸಂಘ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.18 ರಷ್ಟು ಸ್ಥಾನವನ್ನು ತರಬೇತಿಗಾಗಿ ಮೀೀಸಲಿರಿಸಲಾಗಿದೆ. ಕನಿಷ್ಠ ವಿದ್ಯಾರ್ಹತೆ ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸಹಕಾರ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತಬೇತಿ ಪಡೆಯಲು ಅರ್ಹರಾಗಿರುತ್ತಾರೆ.

ತರಬೇತಿಗೆ ಅರ್ಜಿ ಸಲ್ಲಿಸಲು ಪ್ರಾಂಶುಪಾಲರು, ಕೆಐಸಿಎಂ ಬೆಂಗಳೂರು ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ನಂ 1/3,2ನೇ ಮಹಡಿ, 3ನೇ ಮುಖ್ಯರಸ್ತೆ, ಚಾವರಾಜಪೇಟೆ, ಬೆಂಗಳೂರು-560 018. ಹೆಚ್ಚಿನ ಮಾಹಿತಿಗಾಗಿ ದೂ. 99021-89872, 95356-32320. 9964002461 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News