ಟಿಕೆಟ್ ರಹಿತ ಪ್ರಯಾಣ: 10.20ಲಕ್ಷ ರೂ.ದಂಡ

Update: 2019-11-19 17:52 GMT

ಬೆಂಗಳೂರು, ನ.19: ಬಿಎಂಟಿಸಿ ಸಾರಿಗೆ ಬಸ್‌ಗಳಲ್ಲಿ ಟಿಕೆಟ್ ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡಿದವರಿಂದ 10.20ಲ್ಷ ರೂ.ದಂಡ ವಸೂಲಿ ಮಾಡಲಾಗಿದೆ.

ಬಿಎಂಟಿಸಿಯ ತನಿಖಾ ತಂಡಗಳು ಅಕ್ಟೋಬರ್-2019ರಿಂದ ಒಟ್ಟು 18,861 ಟ್ರಿಪ್‌ಗಳನ್ನು ತಪಾಸಣೆ ನಡೆಸಿ 5,557 ಟಿಕೆಟ್ ಹಿತ ಪ್ರಯಾಣಿಕರನ್ನು ಪತ್ತೆಹಚ್ಚಿ, ಅವರಿಂದ ಒಟ್ಟು ರೂ.10.50ಲಕ್ಷ ರೂ.ದಂಡ ವಸೂಲಿ ಮಾಡಿ, ಸಂಸ್ಧೆಯ ನಿರ್ವಾಹಕರುಗಳ ವಿರುದ್ಧ 2,983 ಪ್ರಕರಣಗಳನ್ನು ದಾಖಲಿಸಲಾಗಿದೆ.

ಮಹಿಳಾ ಪ್ರಯಾಣಿಕರಿಗೆಂದೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 286 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 28,600ರೂ. ಗಳನ್ನು ಮೋಟಾರು ವಾಹನ ಕಾಯ್ದೆ 1988 ಕಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿರುತ್ತದೆ.

ಪ್ರಯಾಣಿಕರು ಬಿಎಂಟಿಸಿ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್, ದಿನದ ಪಾಸು, ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯ ಬಹುದಾಗಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News