ಕೊಳ್ಳೇಗಾಲ: ವಿವಾದಾತ್ಮಕ ಸುತ್ತೋಲೆ ಹೊರಡಿಸಿದ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಧರಣಿ

Update: 2019-11-19 18:41 GMT

ಕೊಳ್ಳೇಗಾಲ,ನ.19: ಡಾ.ಬಾಬಾಸಾಹೇಬ್ ಅಂಬೇಡ್ಕರ್ ಕುರಿತು ವಿವಾದಾತ್ಮಕ ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಅಮಾನತ್ತ ಮಾಡಬೇಕು ಎಂದು ಒತ್ತಾಯಿಸಿ ಇಂದು ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದರು.

ನಗರದ ಎಂ.ಜಿ.ಎಸ್.ವಿ ಕಾಲೇಜು ಮೈದಾನದಲ್ಲಿ ಸಮಾವೇಶಗೊಂಡ ಸಾವಿರಾರು ಪ್ರತಿಭಟನೆಕಾರರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ನಗರದ ಪ್ರಮುಖ ರಸ್ತೆಗಳಾದ ಡಾ.ರಾಜ್‍ಕುಮಾರ್ ರಸ್ತೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ತಾಲ್ಲೂಕು ಕಛೇರಿ ತಲುಪಿದ ಪ್ರತಿಭಟನಾಕಾರರು ಕಛೇರಿಯ ಆವರಣದಲ್ಲಿ ಕುಳಿತು ಧರಣಿ ನಡೆಸಿದರು.

ಸಂವಿಧಾನವನ್ನು ಮುಟ್ಟಲು ಹೋದರೆ ನಮ್ಮದೇ ಆದಂತಹ ಪ್ರತ್ಯೇಕ ದ್ರಾವಿಡ ದೇಶವನ್ನು ಪಡೆದುಕೊಳ್ಳಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸ್ಮಾರಕ ಸಂಘದ ಅಧ್ಯಕ್ಷ ನಟರಾಜು, ನಗರಸಭೆ ಸದಸ್ಯರಾದ ಮಂಜು, ಶಾಂತರಾಜು, ನಾಸೀರ್‍ಷರೀಪ್, ರಾಘವೇಂದ್ರ, ಪುಟ್ಟಬುದ್ದಿ, ನಟರಾಜುಮಾಳಿಗೆ, ಪ್ರಭುಸ್ವಾಮಿ, ಚೇತನ್‍ದೊರೆ, ನಾಗರಾಜು, ಲಾಜರ್, ಆನಂದ್, ಸೋಮು, ಮಣಿ, ಜಾಕಿಸುರೇಶ್, ಚಂದು, ದೇವಾನಂದ್,ಕುಮಾರ್ ಸ್ವಾಮಿ.  ಜಗ, ಜಾನ್, ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News