ಪಿ.ಎ. ಕಾಲೇಜಿನಲ್ಲಿ 'ರಾಷ್ಟ್ರೀಯ ಫಾರ್ಮಸಿ ಸಪ್ತಾಹ-2019'

Update: 2019-11-20 11:44 GMT

ಮಂಗಳೂರು : "ಔಷಧ ತಜ್ಞರು ನಿಮ್ಮ ಔಷಧ ಸಲಹೆಗಾರರು" ಎಂಬ ಶೀರ್ಷಿಕೆಯೊಂದಿಗೆ ನಡೆಯುತ್ತಿರುವ "ರಾಷ್ಟ್ರೀಯ ಫಾರ್ಮಸಿ ಸಪ್ತಾಹ-2019"ರ ಅಂಗವಾಗಿ ನಡುಪದವಿನಲ್ಲಿರುವ ಪಿ.ಎ. ಕಾಲೇಜ್ ಆಫ್ ಫಾರ್ಮಸಿ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ನ. 21 ರಂದು ಬೆಳಗ್ಗೆ 10 ಗಂಟೆಗೆ ಆರೋಗ್ಯ ಜಾಗೃತಿ ಜಾಥಾ ದೊಂದಿಗೆ ಫಾರ್ಮಸಿ ಸಪ್ತಾಹವು ಉದ್ಘಾಟನೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ  ಟಿ. ಕೊಡಂದರಾಮ ಸಹಾಯಕ ಪೊಲೀಸ್ ಆಯುಕ್ತರು ಮಂಗಳೂರು ದಕ್ಷಿಣ ಉಪವಿಭಾಗ, ಶ್ರೀ. ಕೆ.ಆರ್. ಗೋಪಿ ಕೃಷ್ಣ ಸರ್ಕಲ್ ಇನ್ಸ್‍ಪೆಕ್ಟರ್ ಉಳ್ಳಾಲ, ಶ್ರೀ. ರವಿ ನಾಯ್ಕ್ ಸರ್ಕಲ್ ಇನ್ಸ್‍ಪೆಕ್ಟರ್ ಕೋಣಾಜೆ ಹಾಗೂ ಡಾ. ಸರ್ಫಾಝ್ ಜೆ ಹಾಶಿಂ ಶೈಕ್ಷಣಿಕ ನಿರ್ದೇಶಕರು ಪಿ.ಎ. ಎಜ್ಯುಕೇಶನಲ್ ಟ್ರಸ್ಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಪಿ.ಎ. ಎಜ್ಯುಕೇಶನಲ್ ಟ್ರಸ್ಟ್ ಮುಖ್ಯ ನಿರ್ದೇಶಕ ಅಬ್ದುಲ್ಲಾ ಇಬ್ರಾಹೀಂ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ನ. 22ರಂದು ಕಾಲೇಜಿನ ಸಭಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಕಲಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ನ. 23ರಂದು ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಗುವುದೆಂದು ಪಿ.ಎ. ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಸಲೀಮುಲ್ಲಾ ಖಾನ್ ಹಾಗೂ ಕಾರ್ಯಕ್ರಮ ಸಂಯೋಜಕ ಡಾ. ಮುಹಮ್ಮದ್ ಮುಬೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News