×
Ad

ನ. 22 : ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ, ಬಹುಭಾಷಾ ಕವಿಗೋಷ್ಠಿ

Update: 2019-11-20 17:50 IST

ಮಂಗಳೂರು : ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕೃತಿಗೆ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಕೊಡಮಾಡುವ ರಾಜ್ಯ ಮಟ್ಟದ ದಿ. ಯು.ಟಿ. ಫರೀದ್ ಸ್ಮರಣಾರ್ಥ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ ಮತ್ತು ಬಹುಭಾಷಾ ಕವಿಗೋಷ್ಠಿ ನ. 22 ಸಂಜೆ 6.30ಕ್ಕೆ ನಗರದ ಹಂಪನಕಟ್ಟೆಯಲ್ಲಿರುವ ಮಸ್ಜಿದುನ್ನೂರ್ ಬಳಿಯ ಐಎಂಎ (ಇಂಡಿಯನ್ ಮೆಡಿಕಲ್ ಅಸೋಸಿಯೇಶನ್) ಸಭಾಂಗಣದಲ್ಲಿ ನಡೆಯಲಿದೆ.

ಶಾಸಕ ಯು.ಟಿ. ಖಾದರ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಸನ್ಮಾರ್ಗ ವಾರಪತ್ರಿಕೆ ಸಂಪಾದಕ ಎ.ಕೆ. ಕುಕ್ಕಿಲ (ಕೃತಿ: ಎಣ್ಣೆ ಬತ್ತಿದ ಲಾಟೀನು) 2017ನೇ ಸಾಲಿನ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

‘ಜಾತ್ಯಾತೀತ ಭಾರತದ ಮುಂದಿರುವ ಸವಾಲುಗಳು’ ಎಂಬ ವಿಷಯದಲ್ಲಿ ವಾರ್ತಾಭಾರತಿ ದೈನಿಕದ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ದಿಕ್ಸೂಚಿ ಭಾಷಣ ಮಾಡಲಿದ್ದು, ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಕವಿಗಳಾದ ಮುಹಮ್ಮದ್ ಬಡ್ಡೂರು, ರಾಜಾರಾಂ ವರ್ಮ ವಿಟ್ಲ, ಮಲ್ಲಿಕಾ ಅಜಿತ್ ಶೆಟ್ಟಿ ಸಿದ್ದಕಟ್ಟೆ, ಜಲೀಲ್ ಮುಕ್ರಿ, ಮುಹಮ್ಮದ್ ಶರೀಫ್ ನಿರ್ಮುಂಜೆ, ಆಯಿಶಾ ಉಳ್ಳಾಲ್, ಮಿಸ್ರಿಯಾ ಇಸ್ಮತ್ ಪಜೀರ್ ಹಾಗೂ ಮೌ. ಇಮ್ರಾನುಲ್ಲಾಹ್ ಖಾನ್ ಮನ್ಸೂರಿ ಬಹುಭಾಷಾ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಮುಸ್ಲಿಮ್ ಲೇಖಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ. ಮುಹಮ್ಮದ್ ಅಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News