ಕಾರು ಢಿಕ್ಕಿ : ಬೈಕ್ ಸವಾರ ಸಾವು

Update: 2019-11-20 12:29 GMT

ಶಿವಮೊಗ್ಗ, ನ. 20: ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮದ ಬಳಿ ನಡೆದಿದೆ. 

ಮೇಗರವಳ್ಳಿ ಸಮೀಪದ ಜಡ್ಡಿನಮನೆ ಗ್ರಾಮದ ನಿವಾಸಿ ಉಮೇಶ್ (56) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. 

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‍ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News