ನ.26 ರಂದು ರಾಷ್ಟ್ರೀಯ ಹಾಲು ದಿನಾಚರಣೆ

Update: 2019-11-20 14:49 GMT

ಉಡುಪಿ, ನ. 20: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಡಾ.ವರ್ಗಿಸ್ ಕುರಿಯನ್ ಜನ್ಮ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಹಾಲು ದಿನಾಚರಣೆ ಅಂಗವಾಗಿ ಶುದ್ಧ ಹಾಲು ಉತ್ಪಾದನೆಯ ಮಹತ್ವ, ಮೇಘ ತಂತ್ರಜ್ಞಾನ ಸಾಪ್ಟ್‌ವೇರ್ ಬಿಡುಗಡೆ ಕಾರ್ಯಕ್ರಮ ನ.26 ರಂದು ಬೆಳಗ್ಗೆ 10 ಗಂಟೆಗೆ ಅಜ್ಜರಕಾಡು ಟೌನ್‌ಹಾಲ್‌ನಲ್ಲಿ ನಡೆಯಲಿದೆ.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News