ದೇಶದ ಅತ್ಯುತ್ತಮ ಸಂಸ್ಥೆಗಳನ್ನು ದುರ್ಬಲಗೊಳಿಸಿದ ಬಿಜೆಪಿ ಮಾರಾಟಕ್ಕಿಳಿದಿದೆ: ಪ್ರಿಯಾಂಕಾ

Update: 2019-11-20 15:01 GMT

ಹೊಸದಿಲ್ಲಿ, ನ.20: ದೇಶವನ್ನು ಬಲಿಷ್ಟವಾಗಿ ನಿರ್ಮಿಸುವುದಾಗಿ ಭರವಸೆ ನೀಡಿರುವ ಬಿಜೆಪಿ, ಈಗ ದೇಶದ ಅತ್ಯುತ್ತಮ ಸಂಸ್ಥೆಗಳನ್ನು ದುರ್ಬಲಗೊಳಿಸಿ ಅವನ್ನು ಮಾರಾಟ ಮಾಡುವ ಯೋಜನೆಯನ್ನು ರೂಪಿಸಲು ಗಮನ ಕೇಂದ್ರೀಕರಿಸಿರುವುದು ದುರದೃಷ್ಟಕರ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ.

 ಸಾರ್ವಜನಿಕ ವಲಯದ ಸಂಸ್ಥೆಗಳಾದ ಏರ್‌ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂಗಳನ್ನು ಮಾರಾಟ ಮಾಡುವ ಕೇಂದ್ರ ಸರಕಾರದ ನಿರ್ಧಾರವನ್ನು ಖಂಡಿಸಿರುವ ಅವರು, ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳು ಭಾರತದ ಸ್ವರ್ಣ ಪಕ್ಷಿಗಳಾಗಿವೆ ಮತ್ತು ದೇಶದ ಹೆಮ್ಮೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

 ಸಾಲದ ಸುಳಿಯಲ್ಲಿರುವ ಸರಕಾರಿ ಅಧೀನದ ಸಂಸ್ಥೆಗಳಾದ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್‌ಗಳನ್ನು ಮುಂದಿನ ಮಾರ್ಚ್ ಅಂತ್ಯದೊಳಗೆ ಮಾರಾಟ ಮಾಡುವ ವಿಶ್ವಾಸವಿದೆ ಎಂದು ಮಾಧ್ಯಮಸಂಸ್ಥೆಗೆ ನೀಡಿದ್ದ ಸಂದರ್ಶನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News