ಗೋ ಶಾಲೆ ಮುಚ್ಚಿರುವ ಬಗ್ಗೆ ಮಾಹಿತಿ ನೀಡಿ: ಹೈಕೋರ್ಟ್ ಸೂಚನೆ

Update: 2019-11-20 15:04 GMT

ಬೆಂಗಳೂರು, ನ.20: ರಾಜ್ಯದಲ್ಲಿ ತೆರೆಯಲಾಗಿದ್ದ ಗೋ ಶಾಲೆಗಳನ್ನು ರಾಜ್ಯ ಸರಕಾರ ಏಕಾಏಕಿ ಮುಚ್ಚಲು ಆದೇಶಿಸಿರುವ ಬಗ್ಗೆ ಮುಂದಿನ ವಿಚಾರಣೆ ವೇಳೆ ತಿಳಿಸಲು ಪಶುಸಂಗೋಪನೆ ಇಲಾಖೆಗೆ ಹೈಕೋರ್ಟ್ ಸೂಚಿಸಿದೆ.

ಈ ಕುರಿತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಚೇಳೂರಿನ ಎ.ಮಲ್ಲಿಕಾರ್ಜುನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಬರಪೀಡಿತ ತಾಲೂಕುಗಳಲ್ಲಿ ಗೋ ಶಾಲೆಗಳನ್ನು ತೆರೆಯಲಾಗಿದೆ ಎಂದು ಸರಕಾರ ಪ್ರಮಾಣ ಪತ್ರ ಸಲ್ಲಿಸಿತ್ತು. ಆದರೆ, ವಿಶೇಷ ತಂಡವು ಗೋ ಶಾಲೆಗಳ ಸ್ಥಾಪನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹಲವು ಬರಪೀಡಿತ ತಾಲೂಕುಗಳಲ್ಲಿ ಗೋ ಶಾಲೆಗಳನ್ನು ಮುಚ್ಚಲಾಗಿದೆ ಎಂಬ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿತ್ತು.

ಈ ಹಿನ್ನೆಲೆಯಲ್ಲಿ ನ್ಯಾಯಪೀಠವು ಗೋ ಶಾಲೆಗಳನ್ನು ಏಕಾಏಕಿ ಮುಚ್ಚಿರುವ ಬಗ್ಗೆ ಮುಂದಿನ ವಿಚಾರಣೆ ವೇಳೆ ತಿಳಿಸಲು ಪಶುಸಂಗೋಪನೆ ಇಲಾಖೆಗೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News