ಮಹಾರಾಷ್ಟ್ರದಲ್ಲಿ ಮುಂದಿನ ತಿಂಗಳು ಶಿವಸೇನೆ ಸರಕಾರ: ಸಂಜಯ್ ರಾವತ್

Update: 2019-11-20 15:34 GMT

ಹೊಸದಿಲ್ಲಿ, ನ. 20: ಮಹಾರಾಷ್ಟ್ರದಲ್ಲಿ ಮುಂದಿನ ತಿಂಗಳು ಶಿವಸೇನೆ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಬುಧವಾರ ಭರವಸೆ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಸರಕಾರ ರಚಿಸುವ ಬಗ್ಗೆ ಮುಂದಿನ ಎರಡು ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ರಾವತ್ ಹೇಳಿದ್ದಾರೆ.

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ರಾಜ್ಯದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಅವರು ತಿಳಿಸಿದರು.

ನಾವು ಸರಕಾರ ರಚಿಸುವ ದಿಶೆಯಲ್ಲಿ ಮುಂದುವರಿಯುತ್ತಿದ್ದೇವೆ. ಮುಂದಿನ ಎರಡು ದಿನಗಳಲ್ಲಿ ಸ್ಪಷ್ಟ ಚಿತ್ರಣ ಸಿಗಲಿದೆ. ಶಿವಸೇನೆ ನೇತೃತ್ವದ ಜನಪ್ರಿಯ ಸರಕಾರ ಡಿಸೆಂಬರ್‌ನಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಸಂಜಯ್ ರಾವತ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News