×
Ad

ಜಾನಪದ ಕಲೆ, ಗಾಯನಗಳ ತರಬೇತಿ ಪಡೆಯಲು ಅರ್ಜಿ ಆಹ್ವಾನ

Update: 2019-11-20 21:08 IST

ಉಡುಪಿ, ನ.20: ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ ವಿವಿಧ ಜಾನಪದ ಕಲಾ ಪ್ರಕಾರಗಳು, ಜಾನಪದ ಗಾಯನದ ಬಗ್ಗೆ ತರಬೇತಿ ಪಡೆಯಲಿಚ್ಛಿಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ಶಿಬಿರಾರ್ಥಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಶಿಬಿರಾರ್ಥಿಗಳಿಗೆ ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮೂಲ ಗುರುಗಳಿಂದ ತರಬೇತಿ ನೀಡಲಾಗುವುದು. 18ರಿಂದ 35 ವರ್ಷದೊಳಗಿನ ಅ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದ ಅ್ಯರ್ಥಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕು. ಶಿಬಿರಾರ್ಥಿಗಳಿಗೆ ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಮೂಲ ಗುರುಗಳಿಂದ ತರಬೇತಿ ನೀಡಲಾಗುವುದು. 18ರಿಂದ 35 ವರ್ಷದೊಳಗಿನ ಅ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದ ಅ್ಯರ್ಥಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಬೇಕು.

ಅರ್ಜಿಗಳನ್ನು ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡ ಭವನ, ಬೆಂಗಳೂರು ಹಾಗೂ ಜಿಲ್ಲಾ ಸಹಾಯಕ ನಿರ್ದೇಶಕರ ಕಾರ್ಯಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳಿಂದ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಡಿ.10 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಜಾನಪದ ಅಕಾಡೆಮಿ ದೂರವಾಣಿ ಸಂಖ್ಯೆ: 080-22215509ನ್ನು ಸಂಪರ್ಕಿಸುವಂತೆ ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News