ಸಹಕಾರ ಸಂಘಗಳ ಮೇಲಿನ ತೆರಿಗೆಯನ್ನು ಹಿಂಪಡೆಯುವಂತೆ ಕೇಂದ್ರಕ್ಕೆ ಮನವಿ: ಬಸರಾಜ ಬೊಮ್ಮಾಯಿ

Update: 2019-11-20 16:40 GMT

ಮೈಸೂರು,ನ.20: ಸಹಕಾರ ಸಂಘಗಳ ಮೇಲಿನ ತೆರಿಗೆಯನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ಗೃಹ ಹಾಗೂ ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಮುಕ್ತ ವಿಶ್ವವಿದ್ಯಾನಿಯದ ಘಟಿಕೋತ್ಸವ ಸಭಾಂಗಣದಲ್ಲಿ ಬುಧವಾರ 66ನೇ ಅಖಿಲ ಭಾರತ ಸಹಕಾರ ಸಪ್ತಾಹ 2019ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಸಹಕಾರ ಸಂಘಗಳ ವ್ಯಾಪ್ತಿಯ ಬ್ಯಾಂಕ್‍ಗಳಿಗೆ ವಿಧಿಸಿರುವ ತೆರಿಗೆಯನ್ನು ಹಿಂಪಡೆಯುವಂತೆ ಸಹಕಾರ ಸಂಘಗಳ ದುರೀಣರು ಮತ್ತು ಸಹಕಾರಿಗಳ ನಿಯೋಗ ಪ್ರಧಾನಿ ಬಳಿಗೆ ತೆರಳಿ ತೆರಿಗೆ ಹಿಂಪಡೆಯುವಂತೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಸಹಕಾರ ಸಂಘಗಳಿಗೆ ತೆರಿಗೆ ವಿಧಿಸಿಲ್ಲ, ಸಹಕಾರ ಸಂಘಗಳ ಬ್ಯಾಂಕ್‍ಗಳಿಗೆ ತೆರಿಗೆ ವಿಧಿಸಲಾಗಿದೆ. ಸಹಕಾರಿಗಳು ಅಷ್ಟೊ ಇಷ್ಟೊ ಹಣವನ್ನು ಕೂಡಿಹಾಕಿ ಸಹಕಾರ ಸಂಘಗಳಲ್ಲಿ ತೊಡಗಿಸಿಕೊಂಡು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಅವರ ಹಣಕ್ಕೆ ತೆರಿಗೆ ವಿಧಿಸುವುದರಿಂದ ಸಾಕಷ್ಟು ತೊಂದರೆಯಾಗುತ್ತದೆ ಎಂಬ ಕೂಗು ಕೇಳಿ ಬರುತಿದ್ದೆ. ಹಾಗಾಗಿ ಮುಂದಿನ ದಿನಗಳಲ್ಲಿ ಒಂದು ನಿಯೋಗೆ ದೆಹಲಿಗೆ ತೆರಳಿ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವುದಾಗಿ ತಿಳಿಸಿದರು.

ರಾಜ್ಯ ಸರ್ಕಾರ ಸಹಕಾರ ಸಂಘಗಳ ಅಭಿವೃದ್ದಿಗೆ ಕೆಲವು ನಿಬಂಧನೆಗಳನ್ನು ಹಾಕಿ ತೊಂದರೆಯಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ಸಹಕಾರ ಸಂಘಗಳ ಉಳಿವಿಗೆ ರಾಜ್ಯ ಸರ್ಕಾರದ ನಿಯಮಗಳನ್ನು ಸಡಿಲಗೊಳಿಸುವುದಾಗಿ ಹೇಳಿದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಸಹಕಾರಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಹರ್ಷವರ್ಧನ್, ಆಗಮಿಸಿದ್ದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರ ಸಂಘದ ಅಧ್ಯಕ್ಷ ಬಿ.ಎಚ್.ಕೃಷ್ಣಾರೆಡ್ಡಿ, ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಮಹಾಮಂಡಳದ ಅಧ್ಯಕ್ಷೆ ಲಲಿತ ಜಿ.ಟಿ.ದೇವೇಗೌಡ, ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಎನ್.ಗಂಗಣ್ಣ, ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ವಿ.ರಾಜೀವ್, ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಎಸ್.ಸಿದ್ದೇಗೌಡ, ಎನ್.ಚಂದ್ರಪ್ಪ, ಬಸವೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News