ಡಿ.1: ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ

Update: 2019-11-20 17:15 GMT

ಮಂಗಳೂರು, ನ.20: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ಆಶ್ರಯದಲ್ಲಿ ನಡೆಯುವ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವು ಡಿ. 1ರಂದು ಬೆಳಗ್ಗೆ 9ರಿಂದ ನಗರದ ನೆಹರೂ ಮೈದಾನ ಬಳಿಯ ಫುಟ್ಬಾಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕ್ರೀಡಾಕೂಟದಲ್ಲಿ 100 ಮೀ. 200 ಮೀ.,400 ಮೀ .ಓಟ, ಬಾಲ್ಪಾಸಿಂಗ್, ಸಂಗೀತಕುರ್ಚಿ, ಮೂರುಕಾಲಿನ ಓಟ, ಗೋಣಿಚೀಲ ಓಟ, ವಾಕಿಂಗ್, ಸ್ಲೋ ಬೈಕ್‌ರೇಸ್, ಬಾಳೆ ಹಣ್ಣು ತಿನ್ನುವ ಸ್ಪರ್ಧೆ, ಕ್ರಿಕೆಟ್, ಹಗ್ಗ ಜಗ್ಗಾಟ ಇನ್ನಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಪತ್ರಕರ್ತರು ಹಾಗೂ ಕ್ರಿಕೆಟ್ ತಂಡಗಳು ಹೆಸರುಗಳನ್ನು ನ.26ರೊಳಗಾಗಿ ಮಂಗಳೂರು ಪ್ರೆಸ್‌ಕ್ಲಬ್ ನಲ್ಲಿ ನೋಂದಾಯಿಸಬಹುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

..

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News