ಶರತ್ ಬಚ್ಚೇಗೌಡ ಸೇರಿ ಇಬ್ಬರು ಬಂಡಾಯ ಅಭ್ಯರ್ಥಿಗಳು ಬಿಜೆಪಿಯಿಂದ ಉಚ್ಛಾಟನೆ

Update: 2019-11-21 14:01 GMT
ಶರತ್ ಬಚ್ಚೇಗೌಡ

ಬೆಂಗಳೂರು, ನ.21: ವಿಧಾನಸಭಾ ಉಪ ಚುನಾವಣೆಯಲ್ಲಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಬಿಜೆಪಿ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಶರತ್ ಬಚ್ಚೇಗೌಡ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ, ಬಳ್ಳಾರಿ ಜಿಲ್ಲೆಯ ವಿಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್‌ ಸಿಂಗ್ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕವಿರಾಜ ಅರಸ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಿ ಅವರು ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News