ಹೂಡೆ: ಶಾಲಾ ಪೋಷಕರಿಗೆ ತರಬೇತಿ ಕಾರ್ಯಾಗಾರ

Update: 2019-11-21 14:27 GMT

ಉಡುಪಿ, ನ.21: ತೋನ್ಸೆ ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಶಾಲೆಯ ಪೋಷಕರಿಗಾಗಿ ಮಕ್ಕಳ ಪೋಷಣೆಯಲ್ಲಿ ಹೆತ್ತವರ ಪಾತ್ರ ಎಂಬ ವಿಷಯದ ಕುರಿತ ಎರಡು ದಿನಗಳ ತರಬೇತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.

ತರಬೇತಿ ಕಾರ್ಯಾಗಾರ ನಡೆಸಿಕೊಟ್ಟ ಸಂಪನ್ಮೂಲ ವ್ಯಕ್ತಿ ಅಂತಾರಾಷ್ಟ್ರೀಯ ಮಟ್ಟದ ತರಬೇತುದಾರ ಅತೀಕುರ್ರಹ್ಮಾನ್ ಮಾತನಾಡಿ, ಪೋಷಕರು ಮಕ್ಕಳೊಂದಿಗೆ ಹೆಚ್ಚು ಸಮಯ ವಿನಿಯೋಗಿಸಬೇಕು. ಕೇವಲ ಮನೆಯ ನಾಲ್ಕು ಗೋಡೆ ಮಧ್ಯದಲ್ಲಿ ಇರಿಸದೆ ಸಾಮಾಜಿಕವಾಗಿ ಎಲ್ಲರೊಂದಿಗೆ ಬೆರೆಯುವ ರೀತಿಯಲ್ಲಿ ತಮ್ಮ ಮಕ್ಕಳನ್ನು ಬೆಳೆಸಬೇಕು ಎಂದರು.

ಸಾಲಿಹಾತ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಸ್ಲಂ ಹೈಕಾಡಿ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಮುಖ್ಯ ಶಿಕ್ಷಕಿಯರಾದ ಸುನಂದಾ, ಲವೀನಾ ಕ್ಲಾರಾ, ಸಮೀನಾ ನಝೀರ್ ಮಾರ್ಗದರ್ಶನ ನೀಡಿದರು. ಸುಮಾರು 800ಕ್ಕೂ ಹೆಚ್ಚು ಪೋಷಕರು ಈ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News