ನೀತಿ ಸಂಹಿತೆ ಉಲ್ಲಂಘನೆ: ಪ್ರಕರಣ ರದ್ದು ಕೋರಿ ಮುನಿರತ್ನ ಸಲ್ಲಿಸಿದ್ದ ಅರ್ಜಿ ವಜಾ

Update: 2019-11-21 16:08 GMT

ಬೆಂಗಳೂರು, ನ.21: ಕಳೆದ ವಿಧಾನಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಅನರ್ಹ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿಯನ್ನು ಸಿಟಿ ಸಿವಿಲ್ ಕೋರ್ಟ್ ವಜಾಗೊಳಿಸಿ, ಸಾಕ್ಷಿಗಳ ವಿಚಾರಣೆಗೆ ಆದೇಶ ಹೊರಡಿಸಿದೆ. ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ್ ಅವರು ಈ ಆದೇಶ ಹೊರಡಿಸಿದ್ದಾರೆ. 

2018ರ ವಿಧಾನಸಭಾ ಚುನಾವಣೆಯಲ್ಲಿ ಪ್ಲೈಯಿಂಗ್ ಸ್ಕ್ವಾಡ್ ಪರಿಶೀಲನೆ ವೇಳೆ ಮುನಿರತ್ನ ಭಾವಚಿತ್ರವಿರುವ ಸುಮಾರು 95 ಲಕ್ಷ ರೂ. ಮೌಲ್ಯದ ಟೀ ಶರ್ಟ್‌ಗಳು ಪತ್ತೆಯಾಗಿದ್ದವು. ಈ ಬಗ್ಗೆ ಚುನಾವಣಾ ಆಯೋಗ ದೂರು ದಾಖಲಿಸಿತ್ತು. ಪ್ರಕರಣದ ಮುಂದಿನ ವಿಚಾರಣೆಯನ್ನು ಕೋರ್ಟ್ ಡಿ.11ಕ್ಕೆ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News