ನ.22ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2019-11-21 16:24 GMT

ಉಡುಪಿ, ನ.21: ಮಣಿಪಾಲ ಮುನಿಯಾಲು ಆಯುರ್ವೇದ ಕಾಲೇಜಿನ 20ನೆ ವರ್ಷದ ಅಂಗವಾಗಿ ಮುನಿಯಾಲು ಆಯುರ್ವೇದ ಆಸ್ಪತ್ರೆ ಹಾಗೂ ಉಚ್ಚಿಲ ಬಡಾ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ನ.22ರಂದು ಬೆಳಗ್ಗೆ 9ಗಂಟೆಯಿಂದ ಅಪರಾಹ್ನ 1:30ರವರೆಗೆ ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಪಂಚಾುತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

 ಈ ಶಿಬಿರವನ್ನು ಪ್ರತಿ ತಿಂಗಳ ನಾಲ್ಕನೇ ಶುಕ್ರವಾರದಂದು ಒಂದು ವರ್ಷ ಕಾಲ ಉಚಿತವಾಗಿ ನಡೆಸಲಾಗುವುದು. ಸಾರ್ವಜನಿಕರು, ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News