ಉಪ ಲೋಕಾಯುಕ್ತರಾಗಿ ಬಿ.ಎಸ್.ಪಾಟೀಲ್ ಪ್ರಮಾಣ ವಚನ

Update: 2019-11-21 16:28 GMT

ಬೆಂಗಳೂರು, ನ.21: ಕರ್ನಾಟಕ ಉಪ ಲೋಕಾಯುಕ್ತರಾಗಿ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. 

ಇಲ್ಲಿನ ರಾಜಭವನ ಆವರಣದ ಸಭಾಂಗಣದಲ್ಲಿ ಜರುಗಿದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಭೀಮನಗೌಡ ಸಂಗನಗೌಡ ಪಾಟೀಲ್ ಅವರಿಗೆ ಅಧಿಕಾರ ಪ್ರಮಾಣ ವಚನವನ್ನು ಬೋಧಿಸಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಕರ್ನಾಟಕ ಲೋಕಾಯುಕ್ತ ಪಿ.ವಿಶ್ವನಾಥಶೆಟ್ಟಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News