ನ.30: ಅನಿತಾ ಪೂಜಾರಿಗೆ ಚಿನ್ನದ ಪದಕ ಪ್ರದಾನ

Update: 2019-11-21 16:37 GMT

ಮಂಗಳೂರು, ನ. 21: ಮುಂಬೈ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದಿಂದ ಮೇ ತಿಂಗಳಲ್ಲಿ ನಡೆಸಿದ ಕನ್ನಡ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಪಡೆದ ಅನಿತಾ ಪಿ. ಪೂಜಾರಿ ತಾಕೊಡೆ ಅವರು ಚೊಚ್ಚಲ ‘ಎಂ.ಬಿ.ಕುಕ್ಯಾನ್’ ಚಿನ್ನದ ಪದಕಕ್ಕೆ ಪಾತ್ರರಾಗಿದ್ದಾರೆ.

ನ.30ರಂದು ಮುಂಬೈ ನಗರದ ಕವಿ ಕುಸುಮಾಗ್ರಜ ಮರಾಠಿ ಭಾಷಾ ಭವನದಲ್ಲಿ ಜರಗುವ ಸಮಾರಂಭದಲ್ಲಿ ಈ ಪದಕವನ್ನು ವಿಶ್ವವಿದ್ಯಾಲಯದ ವತಿಯಿಂದ ಪ್ರದಾನಿಸಲಾಗುವುದು. ಮುಖ್ಯ ಅತಿಥಿಯಾಗಿ ಹಿರಿಯ ಸಾಹಿತಿ ಎಂ.ಬಿ.ಕುಕ್ಯಾನ್, ರಂಗತಜ್ಞ ಜಿ.ಲೋಕೇಶ್, ಸಾಹಿತಿ ಅನುಬೆಳ್ಳೆ, ಅಖಿಲ ಭಾರತೀಯ ತುಳು ಒಕ್ಕೂಟದ ಅಧ್ಯಕ್ಷ ಧರ್ಮಪಾಲ ದೇವಾಡಿಗ, ಸಾಹಿತಿ ಶಾಂತಾರಾಮ ಶೆಟ್ಟಿ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಮೂಲತಃ ಮೂಡುಬಿದಿರೆ ಸಮೀಪದ ತಾಕೊಡೆಯವರಾದ ಅನಿತಾ, ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಬಿ.ಎ. ಪದವಿ ಪಡೆದಿದ್ದರು. ಕಳೆದ ಎರಡು ದಶಕಗಳಿಂದ ಮುಂಬೈ ವಾಸಿಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News