ಪರಿಶಿಷ್ಟ ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ

Update: 2019-11-21 17:55 GMT

ಬೆಂಗಳೂರು, ನ. 21: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ನಗರ ಜಿಲ್ಲಾ ವತಿಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ(ಎಸ್ಸಿ)ಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಂದ 10 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಪ್ರೆಂಟಿಸ್ ತರಬೇತಿ ಇಬ್ಬರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ತಲಾ ಒಬ್ಬ ಅಭ್ಯರ್ಥಿಗೆ ಮಾಸಿಕ 15 ಸಾವಿರ ರೂ.ಗಳ ಶಿಷ್ಯವೇತನ ನೀಡಲಾಗುವುದು.

ಅರ್ಜಿಗಳನ್ನು ಡಿಸೆಂಬರ್ 5ರೊಳಗೆ ಉಪನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 2ನೆ ಮಹಡಿ, ವಾರ್ತಾಸೌಧ, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು-560001 ಇಲ್ಲಿಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾಸೌಧ, ಕಚೇರಿಯನ್ನು ಹಾಗೂ ಮೊಬೈಲ್ ಸಂಖ್ಯೆ: 94808 41219ನ್ನು ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕಿ ಪಲ್ಲವಿ ಹೊನ್ನಾಪುರ ಪ್ರಕಟಣೆಯಲ್ಲಿ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News