ಧಾರವಾಡ ಜಿ.ಪಂ. ಸದಸ್ಯನ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Update: 2019-11-21 18:30 GMT

ಬೆಂಗಳೂರು, ನ.20: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್‌ ಗೌಡರ ಕೊಲೆ ಪ್ರಕರಣದ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಆದೇಶ ರದ್ದು ಕೋರಿ ಮೊದಲ ಆರೋಪಿ ಬಸವರಾಜ ಶಿವಪ್ಪ ಮುತ್ತಗಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಜಿ.ನರೇಂದ್ರಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. 

ಜಿಪಂ ಸದಸ್ಯ ಬಿಜೆಪಿ ಮುಖಂಡ ಯೋಗೀಶ್‌ಗೌಡ ಅವರನ್ನು ಮೂರು ವರ್ಷಗಳ ಹಿಂದೆ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಹೆಸರು ಕೇಳಿ ಬಂದಿತ್ತು. ಯೋಗೀಶ್‌ಗೌಡ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಐವರು ಆರೋಪಿಗಳ ಅರ್ಜಿಯನ್ನು ಈ ಮೊದಲು ಹೈಕೋರ್ಟ್ ವಜಾಗೊಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News