ಹಗಲು-ರಾತ್ರಿ ಟೆಸ್ಟ್: ಬಾಂಗ್ಲಾದೇಶ ಬ್ಯಾಟಿಂಗ್ ಆಯ್ಕೆ

Update: 2019-11-22 07:58 GMT

ಕೋಲ್ಕತಾ, ನ.22: ಬಾಂಗ್ಲಾದೇಶ ವಿರುದ್ಧ ಶುಕ್ರವಾರ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನಾಡುವ ಮೂಲಕ ಭಾರತ ತಂಡ ಪಿಂಕ್ ಚೆಂಡಿನ ಟೆಸ್ಟ್ ಕ್ರಿಕೆಟ್‌ಗೆ ಪ್ರವೇಶಿಸಲು ಸಜ್ಜಾಗಿದೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಪ್ರೇಕ್ಷಕರ ಸಂಖ್ಯೆ ಹೆಚ್ಚಿಸಲು ಹಾಗೂ ಟಿವಿ ವೀಕ್ಷಕರ ಸಂಖ್ಯೆ ದ್ವಿಗುಣಗೊಳಿಸಲು ಭಾರತ ಡೇ-ನೈಟ್ ಟೆಸ್ಟ್‌ನಲ್ಲಿ ಆಡಲು ಸಮ್ಮತಿಸಿದೆ. 2015ರಲ್ಲಿ ಮೊದಲ ಬಾರಿ ಡೇ-ನೈಟ್ ಟೆಸ್ಟ್ ಆರಂಭವಾಗಿತ್ತು. ಶುಕ್ರವಾರ ಮಧ್ಯಾಹ್ನ ಆರಂಭವಾದ ಪಂದ್ಯದಲ್ಲಿ ಟಾಸ್ ಜಯಿಸಿದ ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಆಯ್ದುಕೊಳ್ಳಲು ನಿರ್ಧರಿಸಿದೆ.

ಬಾಂಗ್ಲಾದೇಶ ಪ್ರಧಾನಮಂತ್ರಿ ಶೇಕ್ ಹಸೀನಾ ಹಾಗೂ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಡನ್‌ಗಾರ್ಡನ್ಸ್ ಸ್ಟೇಡಿಯಂನಲ್ಲಿ ಗಂಟೆಯನ್ನು ಬಾರಿಸುವ ಮೂಲಕ ಮೊದಲ ಬಾರಿ ಭಾರತದಲ್ಲಿ ನಡೆಯುತ್ತಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಚಾಲನೆ ನೀಡಿದರು.

ಬಾಂಗ್ಲಾದೇಶ ಆಡುವ 11ರ ಬಳಗದಲ್ಲಿ ಎರಡು ಬದಲಾವಣೆ ಮಾಡಿದ್ದರೆ,ಭಾರತ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ತಂಡವನ್ನೇ ಕಣಕ್ಕಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News