ಉಡುಪಿ: ನ.25ಕ್ಕೆ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟ ಸಮಾರೋಪ

Update: 2019-11-22 14:20 GMT

ಉಡುಪಿ, ನ. 22: ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ನಡೆದ ಜಿಲ್ಲಾ ಮಟ್ಟದ ವೃತ್ತಿಪರ ಕ್ರೀಡಾಕೂಟದ ಸಮಾರೋಪ ಸಮಾರಂಭ ನ.25ರಂದು ಬೆಳಗ್ಗೆ 9:30ಕ್ಕೆ ಉಡುಪಿ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಲ್ಲಿ ನಡೆಯಲಿದೆ.

ಅತಿಥಿಗಳಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಭಾಗವಹಿಸಲಿದ್ದು, ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಡಾ. ಕೆ.ಪ್ರಶಾಂತ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News