ಕರಾವಳಿ ಉತ್ಸವ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

Update: 2019-11-22 17:31 GMT

ಮಂಗಳೂರು, ನ.22: ದ.ಕ. ಜಿಲ್ಲಾ ಕರಾವಳಿ ಉತ್ಸವವನ್ನು ಜಿಲ್ಲಾಡಳಿತದಿಂದ ಆಯೋಜಿಸಲಾಗುತ್ತಿದ್ದು, ಉತ್ಸವದ ವಿವಿಧ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಜಿಲ್ಲೆಯ ವಿವಿಧ ಕಲಾತಂಡಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಕಲಾತಂಡಗಳು ಅರ್ಜಿ ಸಲ್ಲಿಸುವಾಗ ತಮ್ಮ ಕಲಾಪ್ರಕಾರ, ಈ ಹಿಂದೆ ನೀಡಿರುವ ಕಾರ್ಯಕ್ರಮಗಳ ಬಗ್ಗೆ ವಿವರ, ಛಾಯಾಚಿತ್ರಗಳು, ಪತ್ರಿಕಾ ವರದಿಗಳನ್ನೊಳಗೊಂಡ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು ಭವನ, ಉರ್ವಸ್ಟೋರ್, ಮಂಗಳೂರು-575006 ಇಲ್ಲಿಗೆ ನ.29ರೊಳಗೆ ಕಳುಹಿಸಬೇಕು.

ಸಾಂಸ್ಕೃತಿಕ ಕಾರ್ಯಕ್ರಮಗಳು ಕರಾವಳಿ ಜಿಲ್ಲೆಗಳ ಕಲೆ ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತಿರಬೇಕು. ಹಿಂದಿನ ವರ್ಷಗಳಲ್ಲಿ ಕರಾವಳಿ ಉತ್ಸವದಲ್ಲಿ ಕಾರ್ಯಕ್ರಮಗಳನ್ನು ನೀಡಿರುವ ತಂಡಗಳನ್ನು ಪರಿಗಣಿಸಲಾಗುವುದಿಲ್ಲ. ಸಾಂಸ್ಕೃತಿಕ ಸಮಿತಿಯಿಂದ ಆಯ್ಕೆಯಾದ ಕಲಾತಂಡಗಳಿಗೆ ಮಾತ್ರ ಆಯ್ಕೆ ಮತ್ತು ಕಾರ್ಯಕ್ರಮ ನೀಡುವ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News