ನಾಯಕನಾಗಿ ವೇಗದ 5,000ರನ್ ಪೂರೈಸಿದ ಕೊಹ್ಲಿ

Update: 2019-11-22 17:58 GMT

ಕೋಲ್ಕತಾ, ನ.22: ವಿರಾಟ್ ಕೊಹ್ಲಿ ನಾಯಕನಾಗಿ ಅತ್ಯಂತ ವೇಗದಲ್ಲಿ 5,000 ಟೆಸ್ಟ್ ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಕೊಹ್ಲಿ ಈ ಮೈಲುಗಲ್ಲು ತಲುಪಲು 86 ಇನಿಂಗ್ಸ್ ಗಳಲ್ಲಿ ಆಡಿದ್ದಾರೆ. 97 ಇನಿಂಗ್ಸ್‌ಗಳಲ್ಲಿ 5 ಸಾವಿರ ರನ್ ಪೂರೈಸಿದ್ದ ಆಸ್ಟ್ರೇಲಿಯದ ಮಾಜಿ ನಾಯಕ ರಿಕಿ ಪಾಂಟಿಂಗ್ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ.

ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್‌ನ ಭಾರತದ ಮೊದಲ ಇನಿಂಗ್ಸ್‌ನಲ್ಲಿ 32 ರನ್ ಗಳಿಸಿದ ಕೊಹ್ಲಿ ಈ ಸಾಧನೆ ಮಾಡಿದರು. ವೆಸ್ಟ್‌ಇಂಡೀಸ್ ಲೆಜೆಂಡ್ ಕ್ಲೈವ್‌ಲಾಯ್ಡ್(106 ಇನಿಂಗ್ಸ್), ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್(110), ಆಸ್ಟ್ರೇಲಿಯದ ಅಲನ್ ಬಾರ್ಡರ್(116)ಹಾಗೂ ನ್ಯೂಝಿಲ್ಯಾಂಡ್‌ನ ಸ್ಟೀಫನ್ ಫ್ಲೆಮಿಂಗ್(130) ನಾಯಕರಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ 5000ಕ್ಕೂ ಅಧಿಕ ರನ್ ಗಳಿಸಿದ್ದಾರೆ.

ಭಾರತ ಮೊದಲ ಇನಿಂಗ್ಸ್‌ನಲ್ಲಿ ಆರಂಭಿಕ ಆಟಗಾರರಾದ ಮಾಯಾಂಕ್ ಅಗರ್ವಾಲ್(14) ಹಾಗೂ ರೋಹಿತ್ ಶರ್ಮಾ(21)ವಿಕೆಟ್‌ಗಳನ್ನು ಬೇಗನೆ ಕಳೆದುಕೊಂಡಿತು. ಕೊಹ್ಲಿ ಹಾಗೂ ಚೇತೇಶ್ವರ ಪೂಜಾರ ತಂಡಕ್ಕೆ ಆಸರೆಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News