ಕಾಡಾನೆ ಹಾವಳಿ ತಡೆಯಲು ಒತ್ತಾಯಿಸಿ ಧರಣಿ: ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಣೆ
Update: 2019-11-23 15:53 IST
ಮಡಿಕೇರಿ, ನ.23: ಕಾಡಾನೆ ಹಾವಳಿ ತಡೆಯುವಂತೆ ಒತ್ತಾಯಿಸಿ ರೈತ ಸಂಘ ಹಾಗೂ ಹಸಿರು ಸೇನೆಯ ಮುಂದಾಳತ್ವದಲ್ಲಿ ನೂರಾರು ರೈತರು ಕುಟ್ಟ ಬಸ್ ನಿಲ್ದಾಣದಲ್ಲಿ 'ಮಾನವ ಸರಪಳಿ' ರಚಿಸಿ ಅರಣ್ಯ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ರೈತರ ಪ್ರತಿಭಟನೆಗೆ ಮಣಿದು ಸ್ಥಳಕ್ಕಾಗಮಿಸಿದ ಹುಣಸೂರು ವನ್ಯಜೀವಿ ವಿಭಾಗದ ಡಿಎಫ್‍ಒ ಕ್ರಿಸ್ತರಾಜ್ ಅವರು ಗುರುವಾರ ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ ಕರಿಯ ಅವರ ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರದ ಚೆಕ್ ವಿತರಿಸಿದರು.