ಹಿರಿಯರ ಅಥ್ಲೆಟಿಕ್ಸ್: ಅರುಣಕಲಾಗೆ 4 ಚಿನ್ನ
Update: 2019-11-23 20:40 IST
ಉಡುಪಿ, ನ.23: ಕರ್ನಾಟಕ ಮಾಸ್ಟರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಮಂಗಳೂರು ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ 40ನೇ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನ 65+ ವಿಭಾಗದಲ್ಲಿ ಉಡುಪಿಯ ಅರುಣಕಲಾ ಎಸ್.ರಾವ್ ನಾಲ್ಕು ಚಿನ್ನದ ಪದಕಗಳನ್ನು ಜಯಿಸಿದ್ದಾರೆ.
ಅರುಣಕಲಾ ಅವರು 800ಮೀ, 1500ಮೀ., 5000ಮೀ. ಓಟ ಹಾಗೂ 400ಮೀ. ರಿಲೇ ಸ್ಪರ್ಧೆಗಳಲ್ಲಿ ಚಿನ್ನದ ಪದಕ ಜಯಿಸಿದ್ದಾರೆ. ಈ ಮೂಲಕ ಅವರು 2020ನೇ ಫೆಬ್ರವರಿ ತಿಂಗಳಲ್ಲಿ ಮಣಿಪುರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ.
ಅರುಣಕಲಾ ಎಸ್. ರಾವ್ ಅವರು ಹಿರಿಯಡಕ ಬೊಮ್ಮರೆಟ್ಟು ಗ್ರಾಮದ ಗುಡ್ಡೆಯಂಗಡಿ ನಿವಾಸಿ.