ರಾಮದಾಸ್ ಅಠಾವಳೆ ನೇತೃತ್ವದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಇಬ್ಭಾಗ
ಬೆಂಗಳೂರು, ನ.23: ರಾಮದಾಸ್ ಅಠಾವಳೆ ನೇತೃತ್ವದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಇಬ್ಭಾಗವಾಗಿದ್ದು, ರಾಷ್ಟ್ರಾಧ್ಯಂತ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ಪಕ್ಷ ಅಸ್ತಿತ್ವಕ್ಕೆ ಬರುತ್ತಿದೆ ಎಂದು ಆರ್‌ಪಿಐ(ಅ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಲಾಲ್ ತಿಳಿಸಿದರು.
ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ಮತ್ತು ಆರ್ಥಿಕ ಸಮಾನತೆ ಮತ್ತು ಸಂವಿಧಾನಿಕ ಹಕ್ಕುಗಳ ರಕ್ಷಣೆ ಸಿದ್ದಾಂತವನ್ನು ಮರೆತು ರಾಮದಾಸ್ ಅಠಾವಳೆರವರು ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಜತೆ ಕೈ ಜೋಡಿಸಿದ್ದಾರೆ. ಇದು ಅಂಡೇಡ್ಕರ್ ಆಶಯಗಳಿಗೆ ವಿರುದ್ದವಾಗಿದೆ. ಹೀಗಾಗಿ, ಆರ್‌ಪಿಐ (ಅ) ಪಕ್ಷ ಅಸ್ತಿತ್ವಕ್ಕೆ ತರಲಾಗುತ್ತಿದೆ ಎಂದು ತಿಳಿಸಿದರು.
ಈಗಾಗಲೇ ರಾಷ್ಟ್ರದ ಎಲ್ಲ ರಾಜ್ಯಗಳಲ್ಲಿ ಆರ್‌ಪಿಐ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದು, ಕರ್ನಾಟಕದಲ್ಲಿ ಪಕ್ಷವನ್ನು ಕಟ್ಟುವ ನಿಟ್ಟಿನಲ್ಲಿ ಹೋರಾಟಗಾರು ಮತ್ತು ಪಕ್ಷದ ಪದಾಧಿಕಾರಿಗಳ ಆಯ್ಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಆರ್‌ಪಿಐ(ಅ) ಕರ್ನಾಟಕ ರಾಜ್ಯ ಯುವ ಘಟಕದ ಅಧ್ಯಕ್ಷ ಹಲಿದ್ ಖಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.