ಮಾದಕ ವಸ್ತು ಮಾರಾಟ ಆರೋಪ: ವಿದೇಶಿ ಪ್ರಜೆ ಸೆರೆ

Update: 2019-11-23 18:03 GMT

ಬೆಂಗಳೂರು, ನ.23: ಮಾದಕ ವಸ್ತು ಮಾರಾಟ ಆರೋಪದಡಿ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.

ನೈಝಾರಿಯಾ ದೇಶದ ಇಜಾಕ್ ನ್ಯೂಜಿಗೂವ್ (40) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿ ವೀಸಾದ ಅಡಿ ನಗರಕ್ಕೆ ಬಂದಿದ್ದ ಇಜಾಕ್ ನ್ಯೂಜಿಗೂವ್ ವಿಲಾಸಿ ಜೀವನ ನಡೆಸಲು ತನ್ನದೇ ದೇಶದ ಮತ್ತೊಬ್ಬ ಆರೋಪಿಯಿಂದ ಕಡಿಮೆ ಬೆಲೆಗೆ ಗಾಂಜಾ, ಕೊಕೇನ್ ತಂದು ಪ್ರತಿಷ್ಠಿತ ಕಾಲೇಜು ಹಾಗೂ ಶಾಲೆಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಯಿಂದ ಒಂದು ಕೆಜಿ ಗಾಂಜಾ, 19 ಗ್ರಾಂ ಕೊಕೇನ್, ಎರಡು ಮೊಬೈಲ್, ತೂಕದ ಯಂತ್ರ 1 ಸಾವಿರ ನಗದು ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News