ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಬೆಂಕಿಯ ಜ್ವಾಲೆಗೆ ಸುಟ್ಟು ಕರಕಲಾದ ವಸ್ತುಗಳು
Update: 2019-11-24 19:18 IST
ಬೆಂಗಳೂರು, ನ.24: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೆಲ ವಸ್ತುಗಳು ಬೆಂಕಿಯ ಜ್ವಾಲೆಗೆ ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ.
ಇಲ್ಲಿನ ವೈಯಾಲಿಕಾವಲ್ ಬಾಷ್ಯಂ ವೃತ್ತದ ಮೆಡಾಲ ಕ್ಲೂ ಮ್ಯಾಕ್ಸ್ ಡಯಾಗ್ನಾಸ್ಟಿಕ್ಸ್ ಆಸ್ಪತ್ರೆ ಕೇಂದ್ರದ ಮೂರನೇ ಮಹಡಿಯಲ್ಲಿ ರವಿವಾರ ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಉಂಟಾಗಿ ದಟ್ಟ ಹೊಗೆ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿದರು ಎಂದು ಸ್ಥಳೀಯರು ತಿಳಿಸಿದ್ದಾರೆ.