×
Ad

ಕೆಪಿಎಲ್ ನ 7 ತಂಡಗಳ ಮಾಲಕರಿಗೆ ನೋಟಿಸ್ ಜಾರಿಗೊಳಿಸಿದ ಸಿಸಿಬಿ

Update: 2019-11-24 19:45 IST

ಬೆಂಗಳೂರು, ನ.24: ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಕ್ರಿಕೆಟ್ ಪಂದ್ಯಾವಳಿಯಲ್ಲಿ ನಡೆದಿದೆ ಎನ್ನಲಾದ ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 7 ತಂಡಗಳ ಮಾಲಕರಿಗೆ ಸಿಸಿಬಿ ನೋಟಿಸ್ ಜಾರಿಗೊಳಿಸಿದೆ ಎಂದು ವರದಿಯಾಗಿದೆ.

ಇದೇ ತಿಂಗಳ 28ರೊಳಗೆ ಪ್ರಕರಣಕ್ಕೆ ಸಂಬಂಧಿದಂತೆ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದ್ದು, ವಿಚಾರಣೆ ಪ್ರಕ್ರಿಯೆಗೆ ಗೈರಾದರೆ, ಕಾನೂನು ಕ್ರಮ ಜರುಗಿಸಲಾಗುವುದೆಂದು ಸಿಸಿಬಿ ಎಚ್ಚರಿಕೆ ನೀಡಿದೆ ಎಂದು ತಿಳಿದುಬಂದಿದೆ.

ನೋಟಿಸ್ ಏಕೆ?: ವಿಚಾರಣೆ ವೇಳೆ ಆಟಗಾರರು ಕೆಲ ಮಹತ್ವದ ಹೇಳಿಕೆಗಳನ್ನು ನೀಡಿದ್ದು, ಕೆಪಿಎಲ್ ತಂಡದ ಕೆಲ ಮಾಲಕರು ಈ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿರುವ ಶಂಕೆ ಇದೆ. ಹೀಗಾಗಿಯೇ, ಎರಡನೇ ಬಾರಿಗೆ ಈ ನೊಟೀಸ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News