×
Ad

ಗೊಂದಲ ಸೃಷ್ಟಿಸಿದ ಅಜಿತ್ ಟ್ವೀಟ್ ಬಗ್ಗೆ ಪ್ರತಿಕ್ರಿಯಿಸಿದ ಶರದ್ ಪವಾರ್

Update: 2019-11-24 21:01 IST

ಮುಂಬೈ, ನ.24: ಶನಿವಾರ ನಾಟಕೀಯ ವಿದ್ಯಮಾನಗಳ ನಡುವೆ ಬಿಜೆಪಿಯೊಂದಿಗೆ ಕೈಜೋಡಿಸಿ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಅಜಿತ್ ಪವಾರ್ ಅವರು,ತಾನಿನ್ನೂ ಶರದ್ ಪವಾರ್ ಅವರ ಎನ್‌ಸಿಪಿಯ ಭಾಗವಾಗಿದ್ದೇನೆ ಮತ್ತು ಸದಾ ಎನ್‌ಸಿಪಿಯಲ್ಲಿಯೇ ಇರುತ್ತೇನೆ ಎಂದು ಟ್ವೀಟಿಸಿದ್ದಾರೆ. ಶರದ್ ಪವಾರ್ ಅವರು ನಮ್ಮ ನಾಯಕರಾಗಿದ್ದಾರೆ ಎಂದೂ ಅವರು ಸೇರಿಸಿದ್ದಾರೆ.

ಅಜಿತ್ ಪವಾರ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಶರದ್ ಪವಾರ್ ಅವರು ಬಿಜೆಪಿಯೊಂದಿಗೆ ಮೈತ್ರಿಯ ಸಾಧ್ಯತೆಗಳನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಜನರಲ್ಲಿ ಗೊಂದಲ ಮತ್ತು ಸುಳ್ಳು ಭಾವನೆಗಳನ್ನು ಸೃಷ್ಟಿಸಲು ಅಜಿತ್ ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ ಅವರು,ಸರಕಾರ ರಚನೆಗಾಗಿ ಶಿವಸೇನೆ ಮತ್ತು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಎನ್‌ಸಿಪಿ ಸರ್ವಾನುಮತದಿಂದ ನಿರ್ಧರಿಸಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News