ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ಸ್ಪಚ್ಛತಾ ಕಾರ್ಯಕ್ರಮ
Update: 2019-11-24 22:08 IST
ಉಡುಪಿ, ನ.24: ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ವತಿಯಿಂದ ಸ್ವಚ್ಛ ಭಾರತ್ ಅಭಿಯಾನದ ಪ್ರಯುಕ್ತ ಉಡುಪಿ ಇಂದ್ರಾಳಿಯ ರೈಲ್ವೆ ನಿಲ್ದಾಣದಲ್ಲಿ ರವಿವಾರ 40ನೆ ತಿಂಗಳ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನ ಉಡುಪಿ ಜಿಲ್ಲಾ ಆಯುಕ್ತ ಡಾ.ವಿಜಯೇಂದ್ರ ಹಾಗೂ ಸಂಘಟಕ ನಿತೀನ್ ಅಮೀನ್ ನಾಯಕತ್ವದಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನ ವಿದ್ಯಾರ್ಥಿಗಳು ರೈಲ್ವೆ ನಿಲ್ದಾಣದ ಸುತ್ತಮುತ್ತಲು ಹಾಗೂ ರೈಲ್ವೆ ಹಳಿಯನ್ನು ಸ್ವಚ್ಛಗೊಳಿಸಿದರು.