×
Ad

ಆಟೊ ಪ್ರಯಾಣಿಕನ ಮೇಲೆ ಹಲ್ಲೆ: ಆರೋಪ

Update: 2019-11-24 23:45 IST

ಬೆಂಗಳೂರು, ನ.24: ಆಟೊ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇಲ್ಲಿನ ಚೌರಪ್ಪಲೇಔಟ್‌ನ ಮರಿಯನ್ ಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ನರೇಂದ್ರ ಎಂಬುವರು ಹಲ್ಲೆಗೊಳಗಾದ ಪ್ರಯಾಣಿಕ ಎಂದು ತಿಳಿದುಬಂದಿದೆ.

ಆಟೊ ರಿಕ್ಷಾದಲ್ಲಿ ಮರಿಯನ್‌ಪಾಳ್ಯ ಮುಖ್ಯ ರಸ್ತೆಗೆ ಹೋಗಿದ್ದಾಗ, ನರೇಂದ್ರ ಬಳಿ ಆಟೊ ಚಾಲಕ ಹೆಚ್ಚುವರಿ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದಾನೆ. ಇದನ್ನು ಪ್ರಶ್ನೆ ಮಾಡಿದಾಗ ಏಕಾಏಕಿ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಅಮೃತಹಳ್ಳಿ ಪೊಲೀಸ್ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News