ಸಿಎಂ ಯಡಿಯೂರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

Update: 2019-11-25 12:56 GMT

ಬೆಂಗಳೂರು, ನ. 25: ‘ವೀರಶೈವ-ಲಿಂಗಾಯತ ಸಮುದಾಯದ ಒಂದು ಮತವೂ ಬೇರೆಯವರಿಗೆ ಹೋಗಬಾರದು’ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಲಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜೆಡಿಎಸ್ ಕಾನೂನು ಘಟಕ, ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಸೋಮವಾರ ಜೆಡಿಎಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಪಿ. ಪ್ರದೀಪ್ ಕುಮಾರ್, ‘ವೀರಶೈವ ಸಮುದಾಯ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕಬೇಕೆಂದು ಹೇಳಿಕೆ ನೀಡುವ ಮೂಲಕ ಬಿಎಸ್‌ವೈ ಬೆಳಗಾವಿ ಜಿಲ್ಲೆಯ ಅಥಣಿ, ಕಾಗವಾಡ, ಗೋಕಾಕ್ ಕ್ಷೇತ್ರದಲ್ಲಿ ಸಮುದಾಯವನ್ನು ಓಲೈಸುವ ಭಾಷಣ ಮಾಡಿದ್ದಾರೆ.

ಇದು ಮಾದರಿ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಲಿದೆ. ಆದುದರಿಂದ ಚುನಾವಣಾ ಆಯೋಗ ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News